“ನಾನು ಕೃತ್ಯವನ್ನು ಬಲವಾಗಿ ಖಂಡಿಸುತ್ತೇನೆ. ಹಂತಕನನ್ನು ತಕ್ಷಣವೇ ಬಂಧಿಸಲಾಯಿತು. ಇದು ಲವ್ ಜಿಹಾದ್ ಪ್ರಕರಣವಲ್ಲ. ಹಂತಕನಿಗೆ ಕಠಿಣ ಶಿಕ್ಷೆಯಾಗುವುದನ್ನು ಸರ್ಕಾರ ಖಚಿತಪಡಿಸುತ್ತದೆ ಎಂದು ಮುಖ್ಯಮಂತ್ರಿ ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಒಬ್ಬರ ಸಾವನ್ನು ರಾಜಕೀಯ ಕಾರಣಕ್ಕೆ ಬಳಸಿಕೊಳ್ಳುತ್ತಿರುವುದು ವಿಷಾದನೀಯ ಎಂದರು.

“ಪ್ರಕರಣವನ್ನು ಅನಗತ್ಯವಾಗಿ ರಾಜಕೀಯಗೊಳಿಸಲಾಗುತ್ತಿದೆ. ಪ್ರತಿಭಟನೆಗಳು ಸರ್ಕಾರದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು.

ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಅವರನ್ನು ಶುಕ್ರವಾರ ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್‌ನಲ್ಲಿ ಫಯಾಜ್ ಕೊಂಡಿಕೊಪ್ಪ ಎಂಬುವರು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದರು.

ಆದರೆ, ಇತರೆ ವಿದ್ಯಾರ್ಥಿಗಳು ಫಯಾಜ್ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಏತನ್ಮಧ್ಯೆ, ನೇಹಾ ಪೋಷಕರು ತಮ್ಮ ಮಗಳ ಕೊಲೆಯನ್ನು "ಲವ್ ಜಿಹಾದ್" ಪ್ರಕರಣ ಎಂದು ಹೇಳಿದ್ದಾರೆ.

ತನಿಖೆಯನ್ನು ದಿಕ್ಕು ತಪ್ಪಿಸಿದರೆ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಳ್ಳಲಿದೆ ಎಂದು ನೇಹಾಳ ತಂದೆ ನಿರಂಜನ್ ಹಿರೇಮಠ ಎಚ್ಚರಿಸಿದ್ದಾರೆ.