ಸಹರ್ಸಾ (ಬಿಹಾರ), ಬಿಹಾರದಲ್ಲಿ ಬುಧವಾರ ಮತ್ತೊಂದು ಸೇತುವೆ ಕುಸಿದಿದೆ, ಇದು ಮೂರು ವಾರಗಳ ಅವಧಿಯಲ್ಲಿ ರಾಜ್ಯದಲ್ಲಿ 13 ನೇ ಘಟನೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಜಾನೆ ಸಹರ್ಸಾ ಜಿಲ್ಲೆಯ ಮಹಿಷಿ ಗ್ರಾಮದಲ್ಲಿ ಸೇತುವೆ ಕುಸಿದಿದೆ ಎಂದು ಅವರು ಹೇಳಿದರು.

“ಇದು ಸಣ್ಣ ಸೇತುವೆ ಅಥವಾ ಕಾಸ್‌ವೇ ಆಗಿರಬಹುದು. ಜಿಲ್ಲಾಧಿಕಾರಿಗಳು ಸ್ಥಳಕ್ಕೆ ತೆರಳಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ (ಸಹರ್ಸ) ಜ್ಯೋತಿ ಕುಮಾರ್ ತಿಳಿಸಿದ್ದಾರೆ.

ಯಾವುದೇ ಗಾಯ ಅಥವಾ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಸಿವಾನ್, ಸರನ್, ಮಧುಬನಿ, ಅರಾರಿಯಾ, ಪೂರ್ವ ಚಂಪಾರಣ್ ಮತ್ತು ಕಿಶನ್‌ಗಂಜ್ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇತ್ತೀಚಿನ ಸೇತುವೆ ಕುಸಿತದ ಸರಣಿ ಘಟನೆಗಳಿಗೆ ಸಂಬಂಧಿಸಿದಂತೆ ಬಿಹಾರ ಸರ್ಕಾರ ಕನಿಷ್ಠ 15 ಎಂಜಿನಿಯರ್‌ಗಳನ್ನು ಅಮಾನತುಗೊಳಿಸಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕಳೆದ ವಾರ ರಾಜ್ಯದಲ್ಲಿನ ಎಲ್ಲಾ ಹಳೆಯ ಸೇತುವೆಗಳ ಸಮೀಕ್ಷೆ ನಡೆಸಿ ತಕ್ಷಣ ದುರಸ್ತಿ ಮಾಡಬೇಕಾದ ಸೇತುವೆಗಳನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.