“ನಾವು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದೇವೆ. ಅವರು ನಾಲ್ಕು ಚಕ್ರದ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. 50 ಲಕ್ಷ ರೂಪಾಯಿ ಮೌಲ್ಯದ ಭಾರತೀಯ ಮತ್ತು ನೇಪಾಳದ ಕರೆನ್ಸಿಗಳನ್ನು ವಶಪಡಿಸಿಕೊಂಡಿದ್ದೇವೆ. ಅವರಿಂದ ಕೌಂಟಿನ್ ಯಂತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೂರ್ವ ಚಂಪಾರಣ್ ಎಸ್ಪಿ ಕಾಂತೇಶ್ ಕುಮಾರ್ ಮಿಶ್ರ್ ತಿಳಿಸಿದ್ದಾರೆ.



ಪ್ರಾಥಮಿಕ ತನಿಖೆಯ ಪ್ರಕಾರ ಇದು ಹವಾಲಾ ಹಣ ಎಂದು ತೋರುತ್ತಿದೆ ಎಂದು ಪ್ರದೇಶದಲ್ಲಿ ನಾಕಾ ತಪಾಸಣೆ ನಡೆಸಿದಾಗ ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.



ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಹಾರ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ನಿರಂತರವಾಗಿ ವಾಹನ ತಪಾಸಣೆ ನಡೆಸುತ್ತಿದ್ದಾರೆ.



ಆರನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಪೂರ್ವ ಚಂಪಾರಣ್, ಪಶ್ಚಿಮ ಚಂಪಾರಣ್ ಮತ್ತು ವಾಲ್ಮೀಕಿನಗರ ಲೋಕಸಭಾ ಕ್ಷೇತ್ರಗಳಿಗೆ ಮಾ.25 ರಂದು ಮತದಾನ ನಡೆಯಲಿದೆ.