ಗಾಂಧಿಯವರು 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ACMM) ನ್ಯಾಯಾಲಯದ ಮುಂದೆ ಹಾಜರಾದರು.

ಮಾಜಿ ಸಂಸದ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಸಹೋದರ ಡಿ.ಕೆ. ಸುರೇಶ್ ಅವರು ರಾಹುಲ್ ಗಾಂಧಿಗೆ 75 ಲಕ್ಷ ರೂಪಾಯಿ ಮೌಲ್ಯದ ಆಸ್ತಿಯ ಶ್ಯೂರಿಟಿ ನೀಡಿದ್ದರು. ನ್ಯಾಯಾಲಯವು ಜುಲೈ 30 ಕ್ಕೆ ಪ್ರಕರಣವನ್ನು ಮುಂದೂಡಿದೆ. ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಲು ವಕೀಲರು ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನ್ಯಾಯಾಲಯದ ಆವರಣದಲ್ಲಿ ಜಮಾಯಿಸಿದ್ದರು.

ನ್ಯಾಯಾಲಯದ ಕಲಾಪ ಮುಗಿದ ನಂತರ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಗಾಂಧಿ ಪರ ಘೋಷಣೆಗಳನ್ನು ಕೂಗಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಒಂದೇ ಕಾರಿನಲ್ಲಿ ಕೋರ್ಟ್ ಆವರಣದಿಂದ ಹೊರಟರು. ಖುಷಿಯ ಮೂಡ್ ನಲ್ಲಿದ್ದಂತೆ ಕಾಣುತ್ತಿದ್ದ ರಾಹುಲ್ ಗಾಂಧಿ ವಾಹನದಿಂದಲೇ ಪಕ್ಷದ ಕಾರ್ಯಕರ್ತರತ್ತ ಕೈ ಬೀಸಿದರು.

ಇದಕ್ಕೂ ಮುನ್ನ ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿ ಅವರನ್ನು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಸ್ವಾಗತಿಸಿದರು.

ಮಾನನಷ್ಟ ಮೊಕದ್ದಮೆಯು ಕರ್ನಾಟಕದ ಹಿಂದಿನ ಬಿಜೆಪಿ ಸರ್ಕಾರವು ಸರ್ಕಾರಿ ಯೋಜನೆಗಳನ್ನು ನಿರ್ವಹಿಸಲು 40 ಪರ್ಸೆಂಟ್ ಕಮಿಷನ್ ಪಡೆಯುತ್ತಿದೆ ಎಂದು ಆರೋಪಿಸಿ ಪೂರ್ಣ ಪುಟದ ಜಾಹೀರಾತುಗಳನ್ನು ಪ್ರಕಟಿಸುವ ಮೂಲಕ ಕಾಂಗ್ರೆಸ್ ಪ್ರಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದೆ.

ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ರಾಜ್ಯದ ಜನರನ್ನು ದಾರಿ ತಪ್ಪಿಸುವ ಸಲುವಾಗಿ ಸುಳ್ಳು ಆರೋಪಗಳನ್ನು ಹೊರಿಸಿದ್ದು, ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 500 ರ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಪ್ರಸಾದ್ ವಾದಿಸಿದರು.

ಸಿಎಂ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಜೂನ್ 1ರಂದು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದಿದ್ದರು. ಪ್ರಕರಣದ ಕಕ್ಷಿದಾರರಾಗಿರುವ ರಾಹುಲ್ ಗಾಂಧಿ ಅವರು ಅಂದು ವಾಗ್ದಾನ ನೀಡಿದರೂ ಗೈರುಹಾಜರಾಗಿದ್ದರು.

ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಬೇಕು ಎಂದು ಬಿಜೆಪಿ ನಾಯಕನ ಪರ ವಕೀಲರು ಕೋರಿದ್ದರು.