ಮುಂಬೈ, ನಾಗರಿಕ ಸಂಸ್ಥೆ, ಪ್ರಮುಖ ಆಸ್ಪತ್ರೆಗಳು ಮತ್ತು ಕಾಲೇಜುಗಳು ಸೇರಿದಂತೆ ಮುಂಬೈನ 60 ಕ್ಕೂ ಹೆಚ್ಚು ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ್ದಕ್ಕಾಗಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಸೋಮವಾರ ಮತ್ತು ಮಂಗಳವಾರ ಇಮೇಲ್‌ಗಳನ್ನು ಸ್ವೀಕರಿಸಲಾಗಿದೆ.

ಬಾಂಬ್‌ಗಳನ್ನು ಹಾಕಲಾಗಿದೆ ಎಂದು ಬೆದರಿಕೆಯ ಇಮೇಲ್ ಅನ್ನು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಇತರ ಪ್ರಮುಖ ಸಂಸ್ಥೆಗಳಿಗೆ ಕಳುಹಿಸಲಾಗಿದೆ. ನಗರದ ಪ್ರಮುಖ ಆಸ್ಪತ್ರೆಗಳು ಮತ್ತು ಕಾಲೇಜುಗಳಿಗೆ ಇದೇ ರೀತಿಯ ಇಮೇಲ್ ಬಂದಿದೆ.

ಘಟನೆಯ ಗಂಭೀರತೆಯನ್ನು ಪರಿಗಣಿಸಿ, ಕಳುಹಿಸಿದವರ ವಿರುದ್ಧ ಆಜಾದ್ ಮೈದಾನ್ ಪೊಲೀಸ್ ಠಾಣೆಯಲ್ಲಿ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪೊಲೀಸರು ಆ ಸಂಸ್ಥೆಗಳ ಭದ್ರತಾ ತಪಾಸಣೆ ನಡೆಸಿದ್ದು, ಈ ಎಲ್ಲ ಸ್ಥಳಗಳಲ್ಲಿ ಅನುಮಾನಾಸ್ಪದವಾಗಿ ಏನೂ ಪತ್ತೆಯಾಗದ ಕಾರಣ ಯಾರೋ ಕಿಡಿಗೇಡಿತನ ಆಡಿರುವುದು ಬೆಳಕಿಗೆ ಬಂದಿದೆ.