ಈ ಸಂಖ್ಯೆಯಲ್ಲಿ ಗೃಹರಕ್ಷಕರು, ನೈರ್ಮಲ್ಯ ಕಾರ್ಯಕರ್ತರು ಮತ್ತು ಇತರ ಚುನಾವಣಾ ಸಿಬ್ಬಂದಿ ಸೇರಿದ್ದಾರೆ.

ಬಲ್ಲಿಯಾ ಲೋಕಸಭಾ ಕ್ಷೇತ್ರದ ಸಿಕಂದರ್‌ಪುರ ಪ್ರದೇಶದ ಮತಗಟ್ಟೆಯೊಂದರಲ್ಲಿ ಮತದಾರ ಮೃತಪಟ್ಟಿದ್ದಾನೆ ಎಂದು ಅವರು ಹೇಳಿದರು.

ಮತಗಟ್ಟೆಯಲ್ಲಿ ನಿಂತಿದ್ದ ರಾಮ್ ಬದನ್ ಚೌಹಾಣ್ ಎಂಬ ಮತದಾರರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು, ಅವರನ್ನು ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.

ಆಯಾ ಕ್ಷೇತ್ರಗಳಲ್ಲಿ ಚುನಾವಣಾ ಸಿಬ್ಬಂದಿ ಸಾವಿನ ಬಗ್ಗೆ ವರದಿ ಸಲ್ಲಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಿಇಒ ರಿನ್ವಾ ತಿಳಿಸಿದ್ದಾರೆ.

ಜಿಲ್ಲಾಡಳಿತದ ಅಧಿಕಾರಿಗಳು ಮೃತ ಸಿಬ್ಬಂದಿಯ ಮರಣೋತ್ತರ ಪರೀಕ್ಷೆಯ ವರದಿಯನ್ನು ಸಹ ಸಲ್ಲಿಸುತ್ತಾರೆ ಎಂದು ಅವರು ಹೇಳಿದರು.

ಚುನಾವಣಾ ಆಯೋಗದ ಆದೇಶದನ್ವಯ ಮೃತ ಚುನಾವಣಾ ಸಿಬ್ಬಂದಿಯ ಕುಟುಂಬ ಸದಸ್ಯರಿಗೆ 15 ಲಕ್ಷ ಪರಿಹಾರ ನೀಡಲಾಗುವುದು ಎಂದರು.

ರಮಾಬಾಯಿ ಅಂಬೇಡ್ಕರ್ ಮೈದಾನದಲ್ಲಿ ಇವಿಎಂಗಳ ಕಾವಲು ಕಾಯುತ್ತಿದ್ದ ಪಿಎಸಿ ಕಾನ್‌ಸ್ಟೆಬಲ್ ಶನಿವಾರ ಲಕ್ನೋದಲ್ಲಿ ಸಾವನ್ನಪ್ಪಿದ್ದಾರೆ.

ಜೆಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಉಪೇಂದ್ರ ಅಗರ್ವಾಲ್ ಅವರು ಕಾನ್ಸ್‌ಟೇಬಲ್ ಸಾವನ್ನು ಖಚಿತಪಡಿಸಿದ್ದು, ಸ್ಥಳದಲ್ಲಿ ಕರ್ತವ್ಯದಲ್ಲಿರುವ ಅಧಿಕಾರಿಗಳಿಗೆ ಕೂಲರ್‌ಗಳು ಮತ್ತು ಇತರ ಸೌಲಭ್ಯಗಳು ಲಭ್ಯವಿದೆ ಎಂದು ಹೇಳಿದರು.

ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಹೇಳಿದರು.

ಏಳನೇ ಹಂತದಲ್ಲಿ, ಉತ್ತರ ಪ್ರದೇಶದ ಮಹಾರಾಜ್‌ಗಂಜ್, ಗೋರಖ್‌ಪುರ, ಕುಶಿನಗರ, ಡಿಯೋರಿಯಾ, ಬನ್ಸ್‌ಗಾಂವ್ (ಎಸ್‌ಸಿ), ಘೋಸಿ, ಸೇಲಂಪುರ, ಬಲ್ಲಿಯಾ, ಗಾಜಿಪುರ, ಚಂದೌಲಿ, ವಾರಣಾಸಿ, ಮಿರ್ಜಾಪುರ ಮತ್ತು ರಾಬರ್ಟ್ಸ್‌ಗಂಜ್ (ಎಸ್‌ಸಿ) ನಲ್ಲಿ ಮತದಾನ ನಡೆಯಿತು.

ಚುನಾವಣಾ ಆಯೋಗವು ಈ ಹಂತದಲ್ಲಿ 1,08,349 ಚುನಾವಣಾ ಸಿಬ್ಬಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿತ್ತು.