ನವದೆಹಲಿ: ಸುಮಾರು 13 ವರ್ಷಗಳ ನಂತರ ದೆಹಲಿ ಸರ್ಕಾರವು ಪೆಟ್ರೋಲ್, ಸಿಎನ್‌ಜಿ ಮತ್ತು ಡೀಸೆಲ್ ವಾಹನಗಳಿಗೆ ಮಾಲಿನ್ಯ ನಿಯಂತ್ರಣ (ಪಿಯುಸಿ) ಪ್ರಮಾಣಪತ್ರ ಶುಲ್ಕವನ್ನು ಹೆಚ್ಚಿಸಿದೆ ಎಂದು ಸಾರಿಗೆ ಸಚಿವ ಕೈಲಾಶ್ ಗಹ್ಲೋಟ್ ಗುರುವಾರ ಹೇಳಿದ್ದಾರೆ.

ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಶುಲ್ಕವನ್ನು 60 ರಿಂದ 80 ರೂ.ಗೆ ಮತ್ತು ನಾಲ್ಕು ಚಕ್ರದ ವಾಹನಗಳ ಶುಲ್ಕವನ್ನು 80 ರಿಂದ 100 ರೂ.ಗೆ ಹೆಚ್ಚಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡೀಸೆಲ್ ವಾಹನಗಳ ಪಿಯುಸಿ ಪ್ರಮಾಣ ಪತ್ರದ ಶುಲ್ಕವನ್ನು 100 ರೂ.ನಿಂದ 140 ರೂ.ಗೆ ಪರಿಷ್ಕರಿಸಲಾಗಿದೆ ಎಂದು ಗಹ್ಲೋಟ್ ಹೇಳಿದ್ದಾರೆ.

ದೆಹಲಿ ಸರ್ಕಾರವು ನಗರದ ಗಾಳಿಯ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಬದ್ಧವಾಗಿದೆ ಮತ್ತು ಎಲ್ಲಾ ವಾಹನಗಳು ಅಗತ್ಯವಿರುವ ಮಾಲಿನ್ಯ ಮಾನದಂಡಗಳನ್ನು ಪೂರೈಸುತ್ತದೆ ಎಂದು ಅವರು ಹೇಳಿದರು.