ಮುಂಬೈ, ಭಾರತೀಯ ಟಿ20 ಕ್ರಿಕೆಟ್ ತಂಡದ ವಿಜಯೋತ್ಸವದ ಪರೇಡ್ ವೀಕ್ಷಿಸಲು ದಕ್ಷಿಣ ಮುಂಬೈನಲ್ಲಿ ಸಾವಿರಾರು ಜನರು ಜಮಾಯಿಸಿದ್ದು, ಗುರುವಾರ ಸಂಜೆ ಮುಂಬೈ ಪೊಲೀಸರು ಮರೈನ್ ಡ್ರೈವ್ ಕಡೆಗೆ ಹೋಗದಂತೆ ಪ್ರಯಾಣಿಕರಿಗೆ ಸೂಚಿಸಿದ್ದಾರೆ.

T20 ವಿಶ್ವಕಪ್ ವಿಜೇತ ತಂಡವು ನಾರಿಮನ್ ಪಾಯಿಂಟ್‌ನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (NCPA) ನಿಂದ ವಾಂಖೆಡೆ ಸ್ಟೇಡಿಯಂಗೆ ಎರಡು ಗಂಟೆಗಳ ತೆರೆದ ಬಸ್ ಪರೇಡ್‌ನಲ್ಲಿ ಭಾಗವಹಿಸಲಿದೆ.

"ವಾಂಖೆಡೆ ಕ್ರೀಡಾಂಗಣದ ಸುತ್ತ ಅಭಿಮಾನಿಗಳ ವಿಪರೀತ ರಶ್ ಕಾರಣ, ಜನರು ಮರೈನ್ ಡ್ರೈವ್ ಕಡೆಗೆ ಪ್ರಯಾಣಿಸುವುದನ್ನು ತಪ್ಪಿಸುವಂತೆ ವಿನಂತಿಸಲಾಗಿದೆ" ಎಂದು ಪೊಲೀಸರು ತಮ್ಮ ಎಕ್ಸ್ ಹ್ಯಾಂಡಲ್ ಮೂಲಕ ಮನವಿ ಮಾಡಿದರು.

ಮಧ್ಯಾಹ್ನ 3 ಗಂಟೆಯಿಂದಲೇ ಜನರು ಮರೈನ್ ಡ್ರೈವ್‌ನಲ್ಲಿ ಜಮಾಯಿಸಲು ಪ್ರಾರಂಭಿಸಿದರು ಮತ್ತು ಕೆಲವು ಸ್ಥಳಗಳಲ್ಲಿ ಜನಸಂದಣಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಹರಸಾಹಸ ಪಟ್ಟರು.

ಜಂಟಿ ಪೊಲೀಸ್ ಕಮಿಷನರ್ (ಕಾನೂನು ಮತ್ತು ಸುವ್ಯವಸ್ಥೆ) ಸತ್ಯನಾರಾಯಣ್ ಅವರು ಬೆಳಿಗ್ಗೆ ಮೆರೈನ್ ಡ್ರೈವ್ ಮತ್ತು ವಾಂಖೆಡೆ ಸ್ಟೇಡಿಯಂನಲ್ಲಿ ಭದ್ರತಾ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.